Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಗಲೆಲ್ಲಾ ನನ್ನ ಮಾತುಗಳಿಗೆ ಅಪಾರ್ಥ ಮಾಡುತ್ತಾರೆ; ಅವರು ಬಗೆಯುವದೆಲ್ಲ ನನಗೆ ಕೇಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡುಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:5
17 ತಿಳಿವುಗಳ ಹೋಲಿಕೆ  

ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು


ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.


ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.


ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.


ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.


“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.


ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು


ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.


ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು