Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ನನ್ನ ಸಂಗಡ ಇರುವದು ನಿಶ್ಚಯ; ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಪಲಾಯನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:9
15 ತಿಳಿವುಗಳ ಹೋಲಿಕೆ  

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?


ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.


ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.


“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು