Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ಯಥಾರ್ಥವಾಗಿ ಬಗೆಹರಿಸುವದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:1
18 ತಿಳಿವುಗಳ ಹೋಲಿಕೆ  

ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು