Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:2
14 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?


ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.


ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.


ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು