Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕ್ಷಣದಲ್ಲಿ ಹರಿದು ಕಾಣದೆಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹರಿದು ಕಾಣದೆಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:7
11 ತಿಳಿವುಗಳ ಹೋಲಿಕೆ  

ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.


ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.


ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.


ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.


ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು