Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:1
16 ತಿಳಿವುಗಳ ಹೋಲಿಕೆ  

ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.


ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.


ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು