Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ದೇವರು ಪ್ರಸನ್ನನಾಗಿ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:10
23 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.


ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.


ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.


ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.


ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,


ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.


ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.


ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.


ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.


ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.


ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.


ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,


ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.


ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.


ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು