Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:2
21 ತಿಳಿವುಗಳ ಹೋಲಿಕೆ  

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ.


ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.


ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.


ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು