Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:5
10 ತಿಳಿವುಗಳ ಹೋಲಿಕೆ  

ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.


ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.


ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.


ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.


ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು