Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೀರ್ಘಾಯುಸ್ಸನು ದಯಪಾಲಿಸು ರಾಜನಿಗೆ I ತಲತಲಾಂತರಕು ಉಳಿಯಲಿ ಆತನಾಳ್ವಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನಿಗೆ ದೀರ್ಘಕಾಲದ ಬಾಳಿಕೆಯನ್ನು ಅನುಗ್ರಹಿಸು; ಅವನ ಆಯುಸ್ಸು ಅನೇಕ ತಲೆಗಳವರೆಗೆ ವೃದ್ಧಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:6
7 ತಿಳಿವುಗಳ ಹೋಲಿಕೆ  

ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.


ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು