ಕೀರ್ತನೆಗಳು 63:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿ |