Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:3
9 ತಿಳಿವುಗಳ ಹೋಲಿಕೆ  

ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.


ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.


ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.


ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು