Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಹನ ಬಲಿಯನರ್ಪಿಸೆ ದೇಗುಲಕೆ ಧಾವಿಸುವೆ I ನಿನಗೆ ನಾ ಹೊತ್ತ ಹರಕೆಗಳನ್ನು ತೀರಿಸುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗ ಹೋಮಗಳನ್ನು ಸಮರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನಾನು ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ದಹನಬಲಿಯೊಂದಿಗೆ ನಿಮ್ಮ ಆಲಯಕ್ಕೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:13
19 ತಿಳಿವುಗಳ ಹೋಲಿಕೆ  

ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.


ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.


ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”


ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.


ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.


ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು