Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಎದ್ದು ಹೊರಡುವಾಗ ಆತನ ವೈರಿಗಳು ಚದರಿಹೋಗುವರು; ಆತನ ಹಗೆಗಾರರು ಬೆಂಗೊಟ್ಟು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:1
21 ತಿಳಿವುಗಳ ಹೋಲಿಕೆ  

ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.


ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.


ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.


ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.


ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.


ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.


ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.


ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು