Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:13
22 ತಿಳಿವುಗಳ ಹೋಲಿಕೆ  

ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.


ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,


ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.


ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.


ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.


ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.


ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು.


“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.


ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.


ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು