Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್‍ಸಂಭವರೇ, ಸಮ್ಮೇಳವಾಗಿ ದೇವನಾದ ಕರ್ತನನ್ನು ಕೊಂಡಾಡಿರಿ ಎಂದು ಹಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:26
10 ತಿಳಿವುಗಳ ಹೋಲಿಕೆ  

ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.


ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.


ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.


ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?


ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು