Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಭೂರಾಜ್ಯಗಳೇ, ಸ್ತುತಿಸಿರಿ ದೇವರನು I ಸಂಕೀರ್ತಿಸಿರಿ ನೀವೆಲ್ಲರು ಪ್ರಭುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ! ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಭೂಮಿಯ ರಾಜ್ಯಗಳೇ, ದೇವರಿಗೆ ಹಾಡಿರಿ. ಯೆಹೋವ ದೇವರನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:32
9 ತಿಳಿವುಗಳ ಹೋಲಿಕೆ  

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.


ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು