ಕೀರ್ತನೆಗಳು 68:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. ಇಸ್ರಾಯೇಲರ ದೇವರ ಮುಂದೆ, ಹೌದು, ದೇವರ ಮುಂದೆಯೇ ಸೀನಾಯಿ ಸಹ ಕದಲಿತು. ಅಧ್ಯಾಯವನ್ನು ನೋಡಿ |