ಕೀರ್ತನೆಗಳು 69:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಕಳ್ಳುಸುಬಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲ ರಾಶಿಯಿಂದ ಎಳೆದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ. ಅಧ್ಯಾಯವನ್ನು ನೋಡಿ |