ಕೀರ್ತನೆಗಳು 69:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಳವಾದ ಕಳ್ಳುಸುಬಿನಲ್ಲಿ ಮುಳುಗುತ್ತಿದ್ದೇನೆ; ನೆಲೆ ಸಿಕ್ಕುವದಿಲ್ಲ. ದೊಡ್ಡ ಮಡುವಿನೊಳಕ್ಕೆ ಬಂದಿದ್ದೇನೆ; ಪ್ರವಾಹವು ನನ್ನನ್ನು ಬಡಕೊಂಡು ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿ |