Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವಮಾನವು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:20
15 ತಿಳಿವುಗಳ ಹೋಲಿಕೆ  

ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.


“ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?


ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು