Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನೋವಿನಿಂದ ದುಃಖಗೊಂಡಿರುವೆ. ದೇವರೇ, ನನ್ನನ್ನು ಮೇಲೆತ್ತಿ ರಕ್ಷಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:29
17 ತಿಳಿವುಗಳ ಹೋಲಿಕೆ  

ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.


ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು