ಕೀರ್ತನೆಗಳು 69:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು. ಅಧ್ಯಾಯವನ್ನು ನೋಡಿ |