Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಭು ಸೇನಾಧೀಶ್ವರಾ, I ನನ್ನಿಂದ ನಿರಾಶೆಯಾಗದಿರಲಿ, ನಿನ್ನ ನಂಬಿದವರಿಗೆ II ಇಸ್ರಯೇಲರ ದೇವಾ I ನನ್ನಿಂದ ನಿಂದೆಯಾಗದಿರಲಿ ನಿನ್ನ ದರ್ಶನಾರ್ಥಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲ್ಯರ ದೇವರೇ, ನಿನ್ನ ದರ್ಶನಾರ್ಥಿಗಳು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿಮ್ನನ್ನು ಹುಡುಕುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:6
10 ತಿಳಿವುಗಳ ಹೋಲಿಕೆ  

ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.


ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು