Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗುಣಿಯನು ತೋಡಿದನು; ಮಣ್ಣನು ಹೊರದೂಡಿದನು I ತೋಡಿದ ಗುಣಿಯಲಿ ತಾನೆ ತಟ್ಟನೆ ಬೀಳುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:15
19 ತಿಳಿವುಗಳ ಹೋಲಿಕೆ  

ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.


ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.


ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.


ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು