Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 70:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 70:2
13 ತಿಳಿವುಗಳ ಹೋಲಿಕೆ  

ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.


ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.


ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.


ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು