Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂವಿುಯ ಅಧೋಭಾಗದಿಂದ ಮೇಲೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:20
26 ತಿಳಿವುಗಳ ಹೋಲಿಕೆ  

ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.


ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.


ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?


ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?


ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.


ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು