Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಅನೇಕರಿಗೆ ಮಾದರಿಯಾಗಿದ್ದೇನೆ. ಯಾಕೆಂದರೆ ನೀನೇ ನನ್ನ ಶಕ್ತಿಗೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:7
14 ತಿಳಿವುಗಳ ಹೋಲಿಕೆ  

ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.


ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು.


ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.


ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು