Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:7
24 ತಿಳಿವುಗಳ ಹೋಲಿಕೆ  

ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.


ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು