Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ! ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ನಿಜವಾಗಿಯೂ ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:1
24 ತಿಳಿವುಗಳ ಹೋಲಿಕೆ  

ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.


ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,


ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;


ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,


ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು