Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:13
12 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.


ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,


ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.


ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,


ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು