Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:27
15 ತಿಳಿವುಗಳ ಹೋಲಿಕೆ  

ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು