Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆ ಕೊಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ ದಬ್ಬಾಳಿಕೆ ಮಾಡಲು ಗರ್ವದಿಂದ ಅವರು ಬೆದರಿಕೆ ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:8
16 ತಿಳಿವುಗಳ ಹೋಲಿಕೆ  

ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.


ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು