Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:10
10 ತಿಳಿವುಗಳ ಹೋಲಿಕೆ  

ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.


ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು