Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರೇ, ನೀನು ಮೊದಲಿಂದಲೂ ನನ್ನ ಅರಸನೂ ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡಿಸಿದಾತನೂ ಆಗಿದ್ದೀಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ. ಭೂಲೋಕಕ್ಕೆ ರಕ್ಷಣೆಯನ್ನು ತರುವವರೂ ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:12
13 ತಿಳಿವುಗಳ ಹೋಲಿಕೆ  

ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು