Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ಭಕ್ತರ ಕೊಂಬುಗಳು ಎತ್ತಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:10
8 ತಿಳಿವುಗಳ ಹೋಲಿಕೆ  

ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.


ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.


ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!


ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು