Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:8
15 ತಿಳಿವುಗಳ ಹೋಲಿಕೆ  

ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.


ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.


ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.


“ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು