ಕೀರ್ತನೆಗಳು 76:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?