Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದ್ಭುತಗಳನ್ನು ನಡಿಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದ್ಭುತಗಳನ್ನು ಮಾಡುವ ದೇವರು ನೀವೇ. ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:14
15 ತಿಳಿವುಗಳ ಹೋಲಿಕೆ  

ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,


ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು