Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ವಿುಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂವಿುಯು ಅಲ್ಲಾಡಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:18
18 ತಿಳಿವುಗಳ ಹೋಲಿಕೆ  

ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.


ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.


“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.


ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು