Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:19
13 ತಿಳಿವುಗಳ ಹೋಲಿಕೆ  

ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.


ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.


ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?


ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು