Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ದೇವರ ನಿಬಂಧನೆಯನ್ನು ಪಾಲಿಸದೆ ಆತನ ಧರ್ಮಶಾಸ್ತ್ರವನ್ನು ಅನುಸರಿಸಲೊಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:10
9 ತಿಳಿವುಗಳ ಹೋಲಿಕೆ  

ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು