Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರು ಮೇಘಮಂಡಲಕೆ ಆಜ್ಞೆಯಿತ್ತನಾತ I ಅಂತರಿಕ್ಷದಾ ದ್ವಾರಗಳನು ತೆರೆದನಾತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:23
6 ತಿಳಿವುಗಳ ಹೋಲಿಕೆ  

ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು