Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:34
10 ತಿಳಿವುಗಳ ಹೋಲಿಕೆ  

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!


ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು