Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಘನತೆಯನ್ನೂ ಆತನ ಪರಾಕ್ರಮವನ್ನೂ ಅದ್ಭುತಕೃತ್ಯಗಳನ್ನೂ ಮುಂದಣ ಸಂತತಿಯವರಿಗೆ ವಿವರಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:4
17 ತಿಳಿವುಗಳ ಹೋಲಿಕೆ  

ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.


ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.


ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.


ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,


ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು