Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:63 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಆಹುತಿಯಾದರವರ ಯುವಜನ ಅಗ್ನಿಗೆ I ವಿವಾಹವಾಗಲಿಲ್ಲ ಅವರ ಕನ್ಯೆಯರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರಿಗೆ ಶೋಭನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:63
8 ತಿಳಿವುಗಳ ಹೋಲಿಕೆ  

ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’


ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.


ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು