Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಯಾಕೋಬ್‍ವಂಶದವರನ್ನು ನುಂಗಿಬಿಟ್ಟು ಅವರ ವಾಸಸ್ಥಳಗಳನ್ನು ಹಾಳುಮಾಡಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೆಂದರೆ ಆ ಜನಾಂಗಗಳು ಯಾಕೋಬ್ಯರನ್ನೂ ಅವರ ದೇಶವನ್ನೂ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅವರು ಯಾಕೋಬರನ್ನು ನುಂಗಿಬಿಟ್ಟಿದ್ದಾರೆ. ಅವರ ನಿವಾಸವನ್ನು ಹಾಳು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:7
9 ತಿಳಿವುಗಳ ಹೋಲಿಕೆ  

ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.


ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು