Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡುವಾಗ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:3
18 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.


ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.


ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.


ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.


ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.


ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.


ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.


ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.


ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?


ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು