Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:4
25 ತಿಳಿವುಗಳ ಹೋಲಿಕೆ  

ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,


ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?


“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.


ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.


ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.


ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.


ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.


ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.


ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು