Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; ಇಸ್ರಾಯೇಲು ನನಗೆ ಅಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:11
16 ತಿಳಿವುಗಳ ಹೋಲಿಕೆ  

ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.


“ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,


ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು